Mysore
21
overcast clouds
Light
Dark

2025ರ ಜೂನ್‌ ವೇಳೆಗೆ ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಪೂರ್ಣ

ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್‌ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಇಂದಿನೆ ಪೂರ್ಣಗೊಳ್ಳಲಿದೆ.

ಈ ಬಗ್ಗೆ ಮಾತನಾಡಿರುವ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು, ದೇವಾಲಯದ ಸಂಕೀರ್ಣ ನಿರ್ಮಾಣವನ್ನು ಡಿಸೆಂಬರ್‌ ವೇಳೆಗೆ ಪೂರ್ಣಗೊಳಿಸುವುದಕ್ಕೆ ಉದ್ದೇಶಿಸಲಾಗಿತ್ತು.

ಆದರೆ ಅದು ಸಾಧ್ಯವಾಗುತ್ತಿಲ್ಲ. ದೇವಾಲಯದ ಶಿಖರದ ನಿರ್ಮಾಣವೇ 120 ದಿನಗಳ ಸಮಯ ತೆಗೆದುಕೊಳ್ಳಲಿದೆ ಎಂದರು.

ಈ ಹಿನ್ನೆಲೆಯಲ್ಲಿ 2025ರ ಫೆಬ್ರವರಿ ವೇಳೆಗೆ ಶಿಖರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಳಿದೆ.

ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಸಪ್ತ ಮಂದಿರದ ವಿಗ್ರಹಗಳನ್ನು ಜೈಪುರದಲ್ಲಿ ನಿರ್ಮಿಸಲಾಗುತ್ತಿದೆ.

ಒಟ್ಟಾರೆಯಾಗಿ ರಾಮಮಂದಿರ ಸಂಕೀರ್ಣದ ಕಾಮಗಾರಿಯು ಜೂನ್‌ .2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.