ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಇಂದಿನೆ ಪೂರ್ಣಗೊಳ್ಳಲಿದೆ.
ಈ ಬಗ್ಗೆ ಮಾತನಾಡಿರುವ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು, ದೇವಾಲಯದ ಸಂಕೀರ್ಣ ನಿರ್ಮಾಣವನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸುವುದಕ್ಕೆ ಉದ್ದೇಶಿಸಲಾಗಿತ್ತು.
ಆದರೆ ಅದು ಸಾಧ್ಯವಾಗುತ್ತಿಲ್ಲ. ದೇವಾಲಯದ ಶಿಖರದ ನಿರ್ಮಾಣವೇ 120 ದಿನಗಳ ಸಮಯ ತೆಗೆದುಕೊಳ್ಳಲಿದೆ ಎಂದರು.
ಈ ಹಿನ್ನೆಲೆಯಲ್ಲಿ 2025ರ ಫೆಬ್ರವರಿ ವೇಳೆಗೆ ಶಿಖರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಳಿದೆ.
ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಸಪ್ತ ಮಂದಿರದ ವಿಗ್ರಹಗಳನ್ನು ಜೈಪುರದಲ್ಲಿ ನಿರ್ಮಿಸಲಾಗುತ್ತಿದೆ.
ಒಟ್ಟಾರೆಯಾಗಿ ರಾಮಮಂದಿರ ಸಂಕೀರ್ಣದ ಕಾಮಗಾರಿಯು ಜೂನ್ .2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…