ಹೊಸದಿಲ್ಲಿ: 18ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೊರ್ಬೆವ್ಯಾಕ್ಸ್ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಕೋವಿಡ್-೧೯ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು (ಎನ್ಟಿಎಜಿಐ) ಕೋರ್ಬೆವ್ಯಾಕ್ಸ್ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಶಿಫಾರಸು ಮಾಡಿತ್ತು. ಇದರ ಆಧಾರದಲ್ಲಿ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.
ಕೊರ್ಬೆವ್ಯಾಕ್ಸ್ ಲಸಿಕೆಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಕೋವಿಡ್-೧೯ ರೋಗ ನಿರೋಧಕ ಕಾರ್ಯಕ್ರಮದಡಿ ಸದ್ಯ ೧೨ ರಿಂದ ೧೪ ವರ್ಷದ ಮಕ್ಕಳಿಗೆ ಇದನ್ನು ನೀಡಲಾಗುತ್ತಿದೆ.
‘ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಪಡೆದಿದ್ದವರಿಗೆ ಪ್ರಾಯೋಗಿಕವಾಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಿದ್ದಾಗ ಅವರ ದೇಹದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಪ್ರತಿಕಾಯಗಳು ವೃದ್ಧಿಯಾಗಿದ್ದನ್ನು ಕೋವಿಡ್-೧೯ ಕಾರ್ಯಪಡೆ ಗಮನಿಸಿತ್ತು. ಈ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಜೂನ್ ೪ರಂದೇ ಒಪ್ಪಿಗೆ ನೀಡಿತ್ತು’ ಎಂದೂ ಮೂಲಗಳು ಮಾಹಿತಿ ನೀಡಿವೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…