ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. ದೇಶದಲ್ಲಿ ಕೋವಿಡ್ನ ಮತ್ತೊಂದು ಉಲ್ಬಣವನ್ನು ತಡೆಗಟ್ಟುವ ಕಾರ್ಯತಂತ್ರವನ್ನು ರೂಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಸೇರಿದಂತೆ, ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಮಾಸ್ಕ್ ಧರಿಸಿದ್ದು ವಿಶೇಷವಾಗಿತ್ತು. ಇದು ದೇಶದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿಯಾಗಬಹುದು ಎಂಬ ಮುನ್ಸೂಚನೆ ನೀಡುತ್ತಿರುವಂತಿದೆ.
ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎನ್ನಲಾಗಿದ್ದು, ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಒಳಬರುವ ಪ್ರಕರಣಗಳನ್ನು ನಿರ್ಬಂಧಿಸುವ ತಂತ್ರ, ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಹೇರುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವುದನ್ನು ಒಳಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.
ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮ್ಯಾಪ್ ಮಾಡಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್ಗಳಿಗೆ ಪ್ರತಿದಿನ ಕಳುಹಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಸಭೆ ನಿರ್ಧರಿಸಿದೆ.
ಇದೇ ವಿಚಾರವಾಗಿ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದ ಶೇ.100ರಷ್ಟು ಜನಸಂಖ್ಯೆಯು ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ನಾವು ವಿಮಾನ ನಿಲ್ದಾಣದಲ್ಲಿ ಮೇಲ್ವಿಚಾರಣೆ ಮಾಡುತ್ತೇವೆ. ಮತ್ತು ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು INSACOG ಗೆ ಕಳುಹಿಸಲು ಪ್ರಯತ್ನಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…