Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ಕೊಟ್ಟ ನ್ಯಾಯಾಲಯ

ಹೈದರಾಬಾದ್: ಪುಷ್ಪ-2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಸ್ಥಳೀಯ ನ್ಯಾಯಾಲಯವೊಂದು ಅವರ ಜಾಮೀನಿನ ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ಮೂಲಕ ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ಅಗತ್ಯವಿದ್ದಾಗ ಚಿಕ್ಕಡಪಲ್ಲಿ ಪೊಲೀಸ್‌ ಠಾಣೆಯ ಎಸ್‌ಎಚ್‌ಓ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ನಿರ್ದಿಷ್ಟ ದೇಶಗಳಿಗೆ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ಪ್ರತಿ ಟ್ರಿಪ್‌ಗೆ ಅವರ ಪ್ರಯಾಣದ ವೇಳಾಪಟ್ಟಿಯನ್ನು ಎಸ್‌ಎಚ್‌ಓಗೆ ತಿಳಿಸಲು ಮತ್ತು ಚಾರ್ಜ್‌ಶೀಟ್‌ ಸಲ್ಲಿಸುವವರೆಗೆ ವಿದೇಶದಲ್ಲಿ ಅವರು ತಂಗಿರುವ ಸ್ಥಳದ ವಿವರಗಳನ್ನು ಒದಗಿಸುವಂತೆ ನಿರ್ದೇಶಿಸಲಾಗಿದೆ. ಉಳಿದ ಜಾಮೀನು ಷರತ್ತುಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ನಟ ಅಲ್ಲು ಅರ್ಜುನ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಜನವರಿ.3ರಂದು ಅಲ್ಲು ಅರ್ಜುನ್‌ಗೆ ನಿಯಮಿತ ಜಾಮೀನು ನೀಡುವಾಗ ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ನಡುವೆ ಎರಡು ತಿಂಗಳವರೆಗೆ ಅಥವಾ ಚಾರ್ಜ್‌ಶೀಟ್‌ ಸಲ್ಲಿಕೆಯಾಗುವವರೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.

ಕೋರ್ಟ್‌ ಅನುಮತಿ ಪಡೆಯದೇ ದೇಶ ತೊರೆಯದಂತೆ ನಿರ್ಬಂಧಿಸಿತ್ತು. ಅಲ್ಲದೇ ತನಿಖೆಗೆ ಸಹಕರಿಸುವಂತೆ ಮತ್ತು ತನಿಖೆಯಲ್ಲಿ ಮಧ್ಯ ಪ್ರವೇಶಿಸುವುದು ಅಥವಾ ಯಾವುದೇ ರೀತಿಯಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದನ್ನು ತಡೆಯುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

Tags:
error: Content is protected !!