ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.
ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಕೊರೊನಾ ವೈರಸ್ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.
ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.
ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…