ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.
ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬಂದಿವೆ. ಈ ಸಂಬಂಧ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಒತ್ತಾಯ ಪೂರ್ವಕವಾಗಿ ಈ ಮೂರು ಕ್ರಿಮಿನಲ್ ಕಾನೂನುಗಳನ್ನು ಅಂಗೀಕರಿಸಲಾಗಿದೆ. ಇದು ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುವ ಬುಲ್ಡೋಜರ್ ನ್ಯಾಯ ಎಂದು ಟೀಕಿಸಿದ್ದಾರೆ.
ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತ ಅನುಭವಿಸಿದ ಬಳಿಕ ಮೋದಿ ಜೀ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವ ರೀತಿ ನಾಟಕ ಮಾಡುತ್ತಿದ್ದಾರೆ. ಸತ್ಯವೇನೆಂದರೆ, ಇಂದು ಜಾರಿಗೆ ಬರುತ್ತಿರುವ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡಿ, ಒತ್ತಾಯಪೂರ್ವಕವಾಗಿ ಜಾರಿಗೆ ತಂದವುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸದೀಯ ವ್ಯವಸ್ಥೆಯಲ್ಲಿ ಈ ಬುಲ್ಡೋಜರ್ ನ್ಯಾಯ ಮೇಲುಗೈ ಸಾಧಿಸಲು ಇಂಡಿಯಾ ಬಣ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…