Mysore
29
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕವಾಗಿ ಗಂಭೀರ ಇಂಧನ ಬಿಕ್ಕಟ್ಟು ಸೃಷ್ಟಿಸುತ್ತಿರುವುದರಿಂದ ಕೇಂದ್ರ ಸರ್ಕಾರ, ಸಾಧ್ಯವಿರುವ ಎಲ್ಲಾ ಮೂಲಗಳಿಂದ ಇಂಧನ ಖರೀದಿಸಲು ಯತ್ನಿಸುತ್ತಿದೆ. ಮುಂದಿನ ದಿನಗಳಲ್ಲಿಊ ಪ್ರಯತ್ನ ಮುಂದುವರಿಯಲಿದೆ ಎಂದು ಹೇಳಿದರು.

ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ 27 ದೇಶಗಳಿಂದ ಕಚ್ಚಾ ತೈಲ, ಎಲ್‌ಎನ್‌ಜಿ ಮತ್ತು ಎಲ್‌ಪಿಜಿ ಅನ್ನು ಆಮದು ಮಾಡಿಕೊಳ್ಳುತ್ತಿದೆ. ಇಂದು ದೇಶವು 41 ದೇಶಗಳಿಂದ ತನ್ನ ಇಂಧನ ಆಮದುಗಳನ್ನು ಪಡೆಯುತ್ತಿದೆ ಎಂದು ಮಾಹಿತಿ ನೀಡಿದರು.

 

 

Tags:
error: Content is protected !!