Mysore
23
overcast clouds

Social Media

ಭಾನುವಾರ, 01 ನವೆಂಬರ್ 2026
Light
Dark

ದೆಹಲಿಯಲ್ಲಿ ಮಾಲಿನ್ಯಕ್ಕೆ ಕಡಿವಾಣ: ಶೇ.50 ಸಿಬ್ಬಂದಿಗೆ ಮನೆಯಿಂದಲೇ ಕೆಲಸ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ.

ವರದಿಯ ಪ್ರಕಾರ, ನವೆಂಬರ್‌ ಒಂದರಿಂದ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇಕಡಾ 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಉಳಿದ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆ ಕಲ್ಪಿಸಲು ನಿರ್ದೇಶನ ನೀಡಲಾಗಿದೆ.

ಇದರೊಂದಿಗೆ, ಬಿಎಸ್‌–6 ಮಾಲಿನ್ಯ ನಿಯಂತ್ರಣ ಮಾನದಂಡಕ್ಕಿಂತ ಕೆಳಗಿನ, ಹೊರರಾಜ್ಯಗಳಲ್ಲಿ ನೋಂದಣಿಯಾದ ವಾಹನಗಳ ದೆಹಲಿ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಕಚೇರಿಗಳಿಗೆ ತೆರಳುವ ವಾಹನಗಳ ಸಂಚಾರವನ್ನು ಕಡಿಮೆ ಮಾಡುವುದು ಹಾಗೂ ವಾಹನಗಳಿಂದ ಹೊರಬರುವ ಹೊಗೆಯನ್ನು ನಿಯಂತ್ರಿಸುವುದು ಈ ಕ್ರಮಗಳ ಉದ್ದೇಶವಾಗಿದೆ.

ಮಾಲಿನ್ಯ ನಿಯಂತ್ರಣಕ್ಕಾಗಿ ಜಾರಿಗೊಳಿಸುವ ಸೂಚನೆಗಳನ್ನು ಪಾಲಿಸಿ, ಗಾಳಿಯ ಗುಣಮಟ್ಟ ಸುಧಾರಿಸುವ ಪ್ರಯತ್ನಕ್ಕೆ ಸಹಕರಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ.

Tags:
error: Content is protected !!