Mysore
18
broken clouds

Social Media

ಮಂಗಳವಾರ, 14 ಜನವರಿ 2025
Light
Dark

ಕಾಂಗ್ರೆಸ್‌ ಸಂಸದರ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆ

ನವದೆಹಲಿ: ಕಾಂಗ್ರೆಸ್‌ ಸಂಸದ ಅಭಿಷೇಕ್‌ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ.

ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರು ಆದೇಶ ಹೊರಡಿಸಿದ್ದಾರೆ.

ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ.

ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಜಗದೀಪ್‌ ಧನಕರ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಜಗದೀಪ್‌ ಧನಕರ್‌ ಅವರು, ಈ ಬಗ್ಗೆ ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದ ಬಂದಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಜ್ಯಸಭೆಯಲ್ಲಿ ಸಭಾಪತಿ ಹೇಳಿಕೆ ಗದ್ದಲಕ್ಕೆ ಕಾರಣವಾಗಿದ್ದು, ತನಿಖೆ ಪೂರ್ಣಗೊಳ್ಳದ ಹೊರತು ಸಭಾಪತಿ ಸದಸ್ಯರ ಹೆಸರು ಹೇಳಬಾರದಿತ್ತು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

 

Tags: