ನವದೆಹಲಿ: ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ.
ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರು ಆದೇಶ ಹೊರಡಿಸಿದ್ದಾರೆ.
ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ.
ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಜಗದೀಪ್ ಧನಕರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಜಗದೀಪ್ ಧನಕರ್ ಅವರು, ಈ ಬಗ್ಗೆ ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದ ಬಂದಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಜ್ಯಸಭೆಯಲ್ಲಿ ಸಭಾಪತಿ ಹೇಳಿಕೆ ಗದ್ದಲಕ್ಕೆ ಕಾರಣವಾಗಿದ್ದು, ತನಿಖೆ ಪೂರ್ಣಗೊಳ್ಳದ ಹೊರತು ಸಭಾಪತಿ ಸದಸ್ಯರ ಹೆಸರು ಹೇಳಬಾರದಿತ್ತು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…