ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ ಒಂಬತ್ತು ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಮದುರೈ ಮೊದಲ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಈ ಮಹತ್ವದ ತೀರ್ಪು ನೀಡಿದ್ದು, ಆರು ವರ್ಷಗಳ ಹಿಂದೆ ಘಟನೆಯಲ್ಲಿ ವ್ಯಾಪಾರಿ ಪಿ.ಜಯರಾಜ್ ಮತ್ತು ಅವರ ಪುತ್ರ ಜೆ.ಬೆನಿಕ್ಸ್ ಪೊಲೀಸ್ ಚಿತ್ರಹಿಂಸೆಗೆ ಬಲಿಯಾಗಿದ್ದರು.
2020 ಜೂನ್ 19ರಂದು ಕೊರೊನಾ ಲಾಕ್‌ಡೌನ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಸತಂಕುಲಂ ಪೊಲೀಸರು ಪಿ.ಜಯರಾಜ್ (೫೮) ಮತ್ತು ಅವರ ಮಗ ಜೆ.ಬೆನ್ನಿಕ್ಸ್ (೩೧) ಅವರನ್ನು ಬಂಧಿಸಿದ್ದರು. ಕಸ್ಟಡಿಯಲ್ಲಿ ಅವರಿಬ್ಬರ ಮೇಲೆ ಚಿತ್ರಹಿಂಸೆ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ. ಜೂನ್ 22ರಂದು ತಂದೆ ಮಗ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಸಿಬಿಐ ತನಿಖೆಯಲ್ಲಿ ಪೊಲೀಸರು ತಂದೆ-ಮಗರನ್ನು ಕ್ರೂರವಾಗಿ ಹೊಡೆದು, ಚಿತ್ರಹಿಂಸೆ ನೀಡಿದ್ದು ದೃಢಪಟ್ಟಿತ್ತು. ಈ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ನ್ಯಾಯಾಲಯವು ಈ ಪ್ರಕರಣವನ್ನು “ರೇರೆಸ್ಟ್ ಆಫ್ ರೇರ್” ಎಂದು ವರ್ಣಿಸಿ, ಗರಿಷ್ಠ ಶಿಕ್ಷೆಯನ್ನು ಒತ್ತಾಯಿಸಿದ್ದ ಸಿಬಿಐ ವಾದವನ್ನು ಅಂಗೀಕರಿಸಿ ಶೀಕ್ಷೆಯನ್ನು ಪ್ರಕಟಿಸಿದೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…