Mysore
20
overcast clouds
Light
Dark

ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ ಸಿಡಬ್ಲ್ಯುಎಂಎ ಸೂಚನೆ

ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು (ಮೇ.21, ಮಂಗಳವಾರ) ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಸೂಚನೆ ಕರ್ನಾಟಕ್ಕೆ ನೀಡಿದೆ.

ಮಂಗಳವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಕಾವೇರಿ ವಾಟರ್ ಮ್ಯಾನೇಜ್‌ಮೆಂಟ್ ಅಥಾರಿಟಿ-ಸಿಡಬ್ಲ್ಯುಎಂಎ) ಸಭೆಯಲ್ಲಿ ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.

ಮಂಗಳವಾರ ಎರಡೂ ಕಡೆಯ ವಾದವನ್ನು ಆಲಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂತಿಮವಾಗಿ ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಬಿಡಲು ಆದೇಶಿಸಿತು.