ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.
ಮುಂದಿನ 15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ತೀವ್ರ ಭಿನ್ನಾಭಿಪ್ರಾಯ ಮುಂದುವರಿದಿರುವ ನಡುವೆಯೇ CWRC ಈ ಮಹತ್ವದ ಶಿಫಾರಸು ಮಾಡಿದೆ.
ರಾಜ್ಯದ ಜಲಾಶಯಗಳ ನೀರಿನ ಮಟ್ಟ, ಮುಂಬರುವ ದಿನಗಳ ನೀರಿನ ಅಗತ್ಯತೆ ಹಾಗೂ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ. ಈ ಆದೇಶದ ವಿರುದ್ಧ ರಾಜ್ಯದಲ್ಲಿ ಮತ್ತೆ ರೈತರು ಹಾಗೂ ವಿವಿಧ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ.
ಕಾವೇರಿ ನೀರಿನ ವಿಚಾರದಲ್ಲಿ ಮುಂದಿನ ಬೆಳವಣಿಗೆಗಳ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.




