ದೇಶ- ವಿದೇಶ

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.

ಮುಂದಿನ 15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ತೀವ್ರ ಭಿನ್ನಾಭಿಪ್ರಾಯ ಮುಂದುವರಿದಿರುವ ನಡುವೆಯೇ CWRC ಈ ಮಹತ್ವದ ಶಿಫಾರಸು ಮಾಡಿದೆ.

ರಾಜ್ಯದ ಜಲಾಶಯಗಳ ನೀರಿನ ಮಟ್ಟ, ಮುಂಬರುವ ದಿನಗಳ ನೀರಿನ ಅಗತ್ಯತೆ ಹಾಗೂ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ. ಈ ಆದೇಶದ ವಿರುದ್ಧ ರಾಜ್ಯದಲ್ಲಿ ಮತ್ತೆ ರೈತರು ಹಾಗೂ ವಿವಿಧ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ.

ಕಾವೇರಿ ನೀರಿನ ವಿಚಾರದಲ್ಲಿ ಮುಂದಿನ ಬೆಳವಣಿಗೆಗಳ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.

ಆಂದೋಲನ ಡೆಸ್ಕ್

Recent Posts

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

6 mins ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

9 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಲಿ

ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ…

9 hours ago

ಓದುಗರ ಪತ್ರ: ಹಳೆ ಪಿಂಚಣಿ ಮರುಜಾರಿಯಿಂದ ಖಜಾನೆಗೆ ಭಾರ ಆಗದೇ?

ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ೩.೫…

9 hours ago

ಓದುಗರ ಪತ್ರ: ದಸರಾ ಚಲನಚಿತ್ರೋತ್ಸವ ಕೈಬಿಡಬಾರದು

ಮೈಸೂರಿನ ದಸರಾ ಚಲನಚಿತ್ರೋತ್ಸವವನ್ನು ಕಳೆದ ಸುಮಾರು ೫೦ ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಪ್ರೇಕ್ಷಕರ ಭಾಗವಹಿಸುವಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ…

9 hours ago

ವರ್ಷದಲ್ಲಿ 180 ದ್ವಿಚಕ್ರ ವಾಹನಗಳ ಕಳ್ಳತನ!

ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ…

9 hours ago