ಶ್ರೀಲಂಕಾರ: ದಿತ್ವಾ ಚಂಡಮಾರುತ ಶ್ರೀಲಂಕಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮಳೆ ಹಾಗೂ ಪ್ರವಾಹದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಚಂಡಮಾರುತದ ಅಬ್ಬರಕ್ಕೆ ಭಾರೀ ಪ್ರವಾಹ ಉಂಟಾಗಿದ್ದು, 334 ಜನರು ಮೃತಪಟ್ಟಿದ್ದಾರೆ. ಪ್ರವಾಹಕ್ಕೆ ಸಿಲುಕಿ ಹಲವರು ಕೊಚ್ಚಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ: ದಿತ್ವಾ ಚಂಡಮಾರುತ : ಶ್ರೀಲಂಕಾಕ್ಕೆ ಭಾರತ ನೆರವು
ಕಲನಿ ನದಿಯಲ್ಲಿ ನೀರಿನ ಮಟ್ಟ ಭಾರೀ ಏರಿಕೆಯಾಗುತ್ತಿದ್ದು, ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.
ಚಂಡಮಾರುತದ ಪರಿಣಾಮ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಅಂತರಾಷ್ಟ್ರೀಯ ಸಮುದಾಯಗಳ ನೆರವು ಕೋರಿದ್ದಾರೆ.
ದೇಶಾದ್ಯಂತ 20 ಸಾವಿರಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು, 7.8 ಲಕ್ಷಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ತಾಣಗಳಿಗೆ ಸ್ಥಳಾಂತರಗೊಂಡಿದ್ದಾರೆ. ಮೂಲಸೌಕರ್ಯ ಸಂಪೂರ್ಣ ಹಾನಿಯಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…