ದೇಶ- ವಿದೇಶ

ದಿತ್ವಾ ಚಂಡಮಾರುತ : ಶ್ರೀಲಂಕಾಕ್ಕೆ ಭಾರತ ನೆರವು

ಕೊಲಂಬೊ(ಶ್ರೀಲಂಕಾ) : ದಿತ್ವಾ ಚಂಡಮಾರುತದಿಂದ ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಭಾರತ ಸಹಾಯ ಹಸ್ತ ಚಾಚಿದೆ.

ಭಾರತವು ‘ಆಪರೇಷನ್ ಸಾಗರ್ ಬಂಧು’ ಹೆಸರಿನಲ್ಲಿ ೮೦ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿಯನ್ನು ಒಳಗೊಂಡ ಎರಡು ರಕ್ಷಣಾ ತಂಡಗಳನ್ನು ದ್ವೀಪ ರಾಷ್ಟ್ರಕ್ಕೆ ಕಳುಹಿಸಿದೆ. ಭಾರತೀಯರೂ ಸೇರಿದಂತೆ ಸಂಕಷ್ಟದಲ್ಲಿ ಸಿಲುಕಿರುವವರ ರಕ್ಷಣೆಗೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳು ಹೈಬ್ರಿಡ್ ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಿದೆ.

ಇದನ್ನು ಓದಿ: ಖಾಸಗಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ : ಮಾಧ್ಯಮದವರಿಗೆ ನೋ ಬೈಟ್‌ ಎಂದ ಸಿಎಂ

ಈ ಕುರಿತು ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಶ್ರೀಲಂಕಾದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್‌ಡಿಆರ್‌ಎಫ್ ಸಿಬ್ಬಂದಿ ಅಲ್ಲಿಗೆ ಧಾವಿಸಿದ್ದಾರೆ. ಸ್ಥಳೀಯ ಅಽಕಾರಿಗಳೊಂದಿಗೆ ನಿಕಟ ಸಮನ್ವಯ ಸಾಽಸಲಿದ್ದಾರೆ ಎಂದು ತಿಳಿಸಿದ್ದಾರೆ.

ಲಂಕಾದ ಕೋಟ್ಮಲೆಯಲ್ಲಿ ಸಿಲುಕಿದ್ದ ಭಾರತೀಯರು, ವಿದೇಶಿ ಪ್ರಜೆಗಳು ಮತ್ತು ಶ್ರೀಲಂಕಾದವರು ಸೇರಿದಂತೆ ೨೪ ಮಂದಿಯನ್ನು ಗರುಡ ಕಮಾಂಡೋಗಳು ರಕ್ಷಿಸಿ ಕೊಲಂಬೊಗೆ ಸ್ಥಳಾಂತರಿಸಿದ್ದಾರೆ ಎಂದು ಭಾರತೀಯ ವಾಯುಪಡೆ ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

12 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

12 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

13 hours ago