ನವದೆಹಲಿ: ಇರಾಕ್ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 18 ರಾಜ್ಯಗಳಲ್ಲಿ ಮಾರ್ಚ್.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲೂ ಮಾರ್ಚ್.13ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರೈತರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದ್ದು, ಜಮೀನುಗಳಲ್ಲಿ ವಾಸಿಸುತ್ತಿರುವ ರೈತರು ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದೆ.



