ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಆಂಧ್ರ ಹಾಗೂ ಒಡಿಶಾಗೆ ಚಂಡಮಾರುತ ಅಪ್ಪಳಿಸಲಿದೆ.
ಮೊಂತಾ ಚಂಡಮಾರುತ ಅಪ್ಪಳಿಸಲಿರುವ ಪರಿಣಾಮ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನು ಓದಿ: ಮೊಂತಾ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 2 ದಿನ ಭಾರೀ ಮಳೆ
ನಾಳೆ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಮೊಂತಾ ಚಂಡಮಾರುತ 110 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು, ಇಡೀ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಆಂಧ್ರಪ್ರದೇಶದ 23 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮೊಂತಾ ಚಂಡಮಾರುತದಿಂದ ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಒಡಿಶಾ ಹಾಗೂ ತಮಿಳುನಾಡಿನಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್.30ರವರೆಗೂ ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…