ದೇಶ- ವಿದೇಶ

ಮೊಂತಾ ಚಂಡಮಾರುತ ಎಫೆಕ್ಟ್‌ :‌ ನಾಲ್ಕು ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಆಂಧ್ರ ಹಾಗೂ ಒಡಿಶಾಗೆ ಚಂಡಮಾರುತ ಅಪ್ಪಳಿಸಲಿದೆ.

ಮೊಂತಾ ಚಂಡಮಾರುತ ಅಪ್ಪಳಿಸಲಿರುವ ಪರಿಣಾಮ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನು ಓದಿ: ಮೊಂತಾ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 2 ದಿನ ಭಾರೀ ಮಳೆ

ನಾಳೆ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಮೊಂತಾ ಚಂಡಮಾರುತ 110 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು, ಇಡೀ ರಾಜ್ಯದಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ.

ಆಂಧ್ರಪ್ರದೇಶದ 23 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮೊಂತಾ ಚಂಡಮಾರುತದಿಂದ ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಒಡಿಶಾ ಹಾಗೂ ತಮಿಳುನಾಡಿನಲ್ಲೂ ಹೈಅಲರ್ಟ್‌ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್.‌30ರವರೆಗೂ ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago