ದೇಶ- ವಿದೇಶ

ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ಮುರುಸು ಚಂಡಮಾರುತ: ಮೂರು ರಾಜ್ಯಗಳಲ್ಲಿ ಹೈಅಲರ್ಟ್‌

ವಿಶಾಖಪಟ್ಟಣ: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾದಲ್ಲಿ ಚಂಡಮಾರುತದ ಆತಂಕ ಎದುರಾಗಿದೆ. ನವೆಂಬರ್‌ 3ರ ಮುಂಜಾನೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ಮೂರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನೆಲ್ಲೂರು ಮತ್ತು ನರಸಾಪುರ ನಡುವಿನ ಭಾಗದಲ್ಲಿ ಚಂಡಮಾರುತ ಕರಾವಳಿ ದಾಟುವ ಮುನ್ಸೂಚನೆ ನೀಡಲಾಗಿದೆ. ಈ ವೇಳೆ ಗಂಟೆಗೆ 100ರಿಂದ 110 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಗಾಳಿಯ ವೇಗ ಗಂಟೆಗೆ 120 ಕಿಲೋಮೀಟರ್‌ವರೆಗೂ ಹೆಚ್ಚಾಗುವ ಸಾಧ್ಯತೆಯಿದೆ.

ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳು ಹಾಗೂ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಒಡಿಶಾದ ದಕ್ಷಿಣ ಜಿಲ್ಲೆಗಳಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶದ ಜನರು ಸ್ಥಳೀಯ ಆಡಳಿತ ಹಾಗೂ ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭಾರೀ ಹಿಮಪಾತ: ಸಂಕಷ್ಟದಲ್ಲಿ ಆರು ಮಂದಿ ಭಾರತೀಯರು

ಕಠ್ಮಂಡು: ನೇಪಾಳದಲ್ಲಿ ಭಾರೀ ಹಿಮಪಾತದಿಂದಾಗಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ…

16 mins ago

ನನ್ನ ವಿರುದ್ಧ ಇಡಿ–ಐಟಿ ದಾಳಿಗೆ ಒತ್ತಡ: ಪ್ರಿಯಾಂಕ್‌ ಖರ್ಗೆ ಆರೋಪ

ಬೆಂಗಳೂರು: ತಮ್ಮ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ಇಡಿ ಮತ್ತು ಐಟಿ ದಾಳಿ ನಡೆಸಲು ಕೇಂದ್ರ ಸಚಿವರೊಬ್ಬರು ಒತ್ತಡ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ನವೆಂಬರ್.6ರಿಂದ ಮಾದಪ್ಪನ ದೀಪಾವಳಿ ಜಾತ್ರಾ ಮಹೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಲಕ್ಷಾಂತರ ಭಕ್ತರ ಆರಾಧ್ಯ ದೈವವಾದ…

2 hours ago

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ! ಕಿಲೋಮೀಟರ್‌ಗಟ್ಟಲೆ ಸರತಿ ಸಾಲು

ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ…

1 day ago

ದೆಹಲಿಯಲ್ಲಿ ಮಾಲಿನ್ಯಕ್ಕೆ ಕಡಿವಾಣ: ಶೇ.50 ಸಿಬ್ಬಂದಿಗೆ ಮನೆಯಿಂದಲೇ ಕೆಲಸ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ.…

1 day ago

ಕರ್ನಾಟಕಕ್ಕೆ ₹4,504 ಕೋಟಿ ಹೆಚ್ಚುವರಿ ತೆರಿಗೆ ಪಾಲು ಬಿಡುಗಡೆ!

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ ತೆರಿಗೆ ಪಾಲಿನ ಕಂತನ್ನು ಬಿಡುಗಡೆ ಮಾಡಿದ್ದು, ಕರ್ನಾಟಕಕ್ಕೆ 4,504 ಕೋಟಿ ರೂಪಾಯಿ ಹಂಚಿಕೆಯಾಗಿದೆ…

1 day ago