Mysore
29
broken clouds

Social Media

ಮಂಗಳವಾರ, 27 ಅಕ್ಟೋಬರ್ 2026
Light
Dark

ಆಂಧ್ರ ಕರಾವಳಿಗೆ ಅರ್ನಾಬ್ ಚಂಡಮಾರುತ ಭೀತಿ: ಅ.28ರಂದು ಕರಾವಳಿ ದಾಟುವ ಸಾಧ್ಯತೆ!

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು ವಿಶಾಖಪಟ್ಟಣಂ ನಡುವಿನ ಯಾನಂ ಸಮೀಪ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವೇಳೆ ಗಂಟೆಗೆ 115ರಿಂದ 125 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಬಿರುಗಾಳಿಯ ರಭಸ ಗಂಟೆಗೆ 140 ಕಿಲೋಮೀಟರ್‌ವರೆಗೆ ತಲುಪಬಹುದು.

ಚಂಡಮಾರುತದ ಪರಿಣಾಮ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಭಾರೀ ಮಳೆಯ ಆತಂಕ ಎದುರಾಗಿದೆ. ಮುನ್ನೆಚ್ಚರಿಕೆಯಾಗಿ ಒಡಿಶಾದ ಕೆಲವು ಜಿಲ್ಲೆಗಳಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಸಮುದ್ರತೀರದಿಂದ ದೂರವಿರುವಂತೆ ಸೂಚಿಸಲಾಗಿದೆ.

 

Tags:
error: Content is protected !!