ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು ವಿಶಾಖಪಟ್ಟಣಂ ನಡುವಿನ ಯಾನಂ ಸಮೀಪ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವೇಳೆ ಗಂಟೆಗೆ 115ರಿಂದ 125 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಬಿರುಗಾಳಿಯ ರಭಸ ಗಂಟೆಗೆ 140 ಕಿಲೋಮೀಟರ್‌ವರೆಗೆ ತಲುಪಬಹುದು.
ಚಂಡಮಾರುತದ ಪರಿಣಾಮ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಭಾರೀ ಮಳೆಯ ಆತಂಕ ಎದುರಾಗಿದೆ. ಮುನ್ನೆಚ್ಚರಿಕೆಯಾಗಿ ಒಡಿಶಾದ ಕೆಲವು ಜಿಲ್ಲೆಗಳಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಸಮುದ್ರತೀರದಿಂದ ದೂರವಿರುವಂತೆ ಸೂಚಿಸಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್…
ಬೆಂಗಳೂರು: ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…
ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…
ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…
ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…
ಕಂಚುಗಾರನ ಕೊಪ್ಪಲು, ಕೆಂಪೇಗೌಡನ ಕೊಪ್ಪಲು, ಕಾಳೇಗೌಡನ ಕೊಪ್ಪಲು, ಕೆಂಚೇಗೌಡನ ಕೊಪ್ಪಲು, ಕೊಮ್ಮೇಗೌಡನ ಕೊಪ್ಪಲು ಹಾಗೂ ಕನ್ನೇಗೌಡನ ಕೊಪ್ಪಲು ಮುಂತಾದ ಪ್ರದೇಶಗಳನ್ನು…