ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಭದ್ರಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ 24 ಮಂದಿಯನ್ನು ಮೋಟಾರು ದೋಣಿಗಳ ಸಹಾಯದಿಂದ ರಕ್ಷಣೆ ಮಾಡಲಾಗಿದೆ.
ರಕ್ಷಿಸಿದವರೆಲ್ಲರನ್ನು ನಿರಾಶ್ರಿತರ ಕೇಂದ್ರಗಳಿಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಒಡಿಶಾದಲ್ಲಿ ಡಾನಾ ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದು, ಮುಂದಿನ 12 ಗಂಟೆಗಳ ಕಾಲ ಸೈಕ್ಲೋನ್ ತೀವ್ರತೆ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…