Mysore
20
broken clouds

Social Media

ಸೋಮವಾರ, 26 ಜನವರಿ 2026
Light
Dark

ಚುನಾವಣೆಗೆ ದಳಪತಿ ಸಿದ್ಧತೆ: ಪಕ್ಷದ ಧ್ವಜ ಬಿಡುಗಡೆ ಮಾಡಿದ ನಟ ವಿಜಯ್‌

ಚೆನ್ನೈ: ತಮಿಳು ನಟ ದಳಪತಿ ವಿಜಯ್‌ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

ಚೆನ್ನೈನಲ್ಲಿ ಗುರುವಾರ(ಆ.22) ನಟ ವಿಜಯ್‌ ಅವರು ಪಕ್ಷದ ನೂತನ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಆರಂಭಿಸಿದ್ದಾರೆ.

ಟಿವಿಕೆ ಪಕ್ಷದ ಕಛೇರಿಯಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದರು. ಈ ವೇಳೆ ಬೇರೆ ಬೇರೆ ಪಕ್ಷಗಳಿಂದಲೂ ಕೆಲ ನಾಯಕರು ಆಗಮಿಸಿದ್ದರು ಎಂದು ವರದಿಯಾಗಿದೆ.

ತಮಿಳಗ ವೆಟ್ರಿ ಕಳಗಂ ಎಂದರೆ ತಮಿಳುನಾಡು ವಿಜಯ್‌ ಪಕ್ಷ ಎಂದರ್ಥ. ಧ್ವಜ ಬಿಡುಗಡೆ ಬಳಿಕ ಮಾತನಾಡಿದ ಅವರು, ಸಮಾನತೆ, ಸಹೋದರತ್ವ, ಜಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.

Tags:
error: Content is protected !!