ಚೆನ್ನೈ: ತಮಿಳು ನಟ ದಳಪತಿ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಚೆನ್ನೈನಲ್ಲಿ ಗುರುವಾರ(ಆ.22) ನಟ ವಿಜಯ್ ಅವರು ಪಕ್ಷದ ನೂತನ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಆರಂಭಿಸಿದ್ದಾರೆ.
ಟಿವಿಕೆ ಪಕ್ಷದ ಕಛೇರಿಯಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದರು. ಈ ವೇಳೆ ಬೇರೆ ಬೇರೆ ಪಕ್ಷಗಳಿಂದಲೂ ಕೆಲ ನಾಯಕರು ಆಗಮಿಸಿದ್ದರು ಎಂದು ವರದಿಯಾಗಿದೆ.
ತಮಿಳಗ ವೆಟ್ರಿ ಕಳಗಂ ಎಂದರೆ ತಮಿಳುನಾಡು ವಿಜಯ್ ಪಕ್ಷ ಎಂದರ್ಥ. ಧ್ವಜ ಬಿಡುಗಡೆ ಬಳಿಕ ಮಾತನಾಡಿದ ಅವರು, ಸಮಾನತೆ, ಸಹೋದರತ್ವ, ಜಾತ್ಯಾತೀತತೆ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…