Mysore
26
light rain

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

ದರ್ಶನ್‌ ಅಂಡ್‌ ಗ್ಯಾಂಗ್‌ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ: ಜುಲೈ.22ರಂದೇ ತೀರ್ಪು ಪ್ರಕಟ

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಅಂಡ್‌ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್‌ ಸೇರಿದಂತೆ 7 ಮಂದಿ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಇಂದು ವಿಚಾರಣೆ ನಡೆದಿದೆ.

ಬಂಧನದ ಕಾರಣಗಳನ್ನಷ್ಟೇ ನಾವು ಕೇಳುತ್ತಿದ್ದೇವೆ. ಬಂಧನ ಕಾನೂನು ಬದ್ಧವಾಗಿದೆ ಎನ್ನುವುದಾದರೆ ಉತ್ತರ ಕೊಡಿ ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ. ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿ ಸುಪ್ರೀಂಕೋರ್ಟ್‌ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.

Tags:
error: Content is protected !!