ಅಮೆರಿಕಾ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.
ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಗೀತಾ ಶಿವರಾಜ್ ಕುಮಾರ್ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈಗ ನಿವೇದಿತಾ ಶಿವಣ್ಣ ಅವರ ಆರೋಗ್ಯ ಕುರಿತು ಟ್ವೀಟ್ ಮಾಡಿದ್ದಾರೆ.
ಆರೋಗ್ಯದ ಬಗ್ಗೆ ಬರೆದುಕೊಂಡಿರುವ ನಿವೇದಿತಾ ಅವರು, ದೇವರ ಕೃಪೆಯಿಂದ ನನ್ನ ತಂದೆಯ ಸರ್ಜರಿ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್ ಕೇರ್‌ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ.ಮುರುಗೇಶ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.
ಇದರ ನಡುವೆ ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ. ಸ್ನೇಹಿತರಿಗೂ ಮತ್ತು ಮಾಧ್ಯಮ ಸದಸ್ಯರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ವ್ಯಕ್ತಪಡಿಸಲು ಬಯಸುತ್ತೇವೆ.
ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿದೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದಿಗೂ ಆಭಾರಿಯಾಗಿರುತ್ತೇವೆ.
ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನ ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…