ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಡಿಸಿಎಂ ಡಿಕೆಶಿ ಅವರು ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು ಎಂದು ಆಗ್ರಹಿಸಿದರು.
ಇನ್ನು ಯತ್ನಾಳ್ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ದೆಹಲಿಗೆ ಸಚಿವ ಸೋಮಣ್ಣ ಅವರ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಾಗಿದ್ದಾರೆ. ರೈಲ್ವೆ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು.
ಇನ್ನು ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತಾರೆ ಎಂಬ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸಂತೋಷ್ ಅವರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ. ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ…
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…