ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲೇಬೇಕು ಎಂದು ಕಾಂಗ್ರೆಸ್ ಸಚಿವರು ಹಾಗೂ ಶಾಸಕರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ.
ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸದ್ಯದ ಮಟ್ಟಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಇಂದು ನವದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





