ನವದೆಹಲಿ: ರಾಜ್ಯದಲ್ಲಿ ಯಾವ ನವೆಂಬರ್ ಕ್ರಾಂತಿಯೂ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಹೈಕಮಾಂಡ್ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೂ ಆಗಲ್ಲ, ಡಿಸೆಂಬರ್ ಕ್ರಾಂತಿಯೂ ಆಗಲ್ಲ. ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. ಕ್ರಾಂತಿಯಾಗೋದು 2028ಕ್ಕೆ ಎಂದು ಹೇಳಿದರು.
ಇದನ್ನು ಓದಿ: ಯಾವ ನವೆಂಬರ್ ಕ್ರಾಂತಿನೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕ್ರಾಂತಿಯಾಗಿ ಕಾಂಗ್ರೆಸ್ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ಈ ಮೂಲಕ 2028ಕ್ಕೆ ಮತ್ತೆ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಹೇಳಿದರು.
ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಪದೇ ಪದೇ ಮಾತನಾಡಿಕೊಳ್ಳುತ್ತಿದ್ದ ರಾಜಕಾರಣಿಗಳ ಬಾಯಿ ಮುಚ್ಚಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.





