ದೇಶ- ವಿದೇಶ

2028ಕ್ಕೆ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗುತ್ತೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಹೈಕಮಾಂಡ್‌ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್‌ ಕ್ರಾಂತಿಯೂ ಆಗಲ್ಲ, ಡಿಸೆಂಬರ್‌ ಕ್ರಾಂತಿಯೂ ಆಗಲ್ಲ. ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. ಕ್ರಾಂತಿಯಾಗೋದು 2028ಕ್ಕೆ ಎಂದು ಹೇಳಿದರು.

ಇದನ್ನು ಓದಿ: ಯಾವ ನವೆಂಬರ್‌ ಕ್ರಾಂತಿನೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕ್ರಾಂತಿಯಾಗಿ ಕಾಂಗ್ರೆಸ್‌ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ಈ ಮೂಲಕ 2028ಕ್ಕೆ ಮತ್ತೆ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಹೇಳಿದರು.

ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಪದೇ ಪದೇ ಮಾತನಾಡಿಕೊಳ್ಳುತ್ತಿದ್ದ ರಾಜಕಾರಣಿಗಳ ಬಾಯಿ ಮುಚ್ಚಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

5 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago