ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳವರೆಗೆ ಮೂಂದೂಡಿಕೆ ಮಾಡಿದೆ.
ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಲೋಕಾಯುಕ್ತ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಡಿ.ಕೆ.ಶಿವಕುಮಾರ್ ಮತ್ತು ಸಿಬಿಐ ಪರ ತಕರಾರು ಸಲ್ಲಿಸಲು ವಕೀಲರಿಗೆ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಲಾಗಿದೆ.
ಇನ್ನು ಶಾಸಕ ಬವಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಅವರು ಆದಾಯ ಮೀರಿ ಆಸ್ತಿಗಳಿಕೆ ಕೇಸ್‌ಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ವಿಚಾರವಾಗಿ ರಾಜ್ಯ ಮತ್ತು ಸಿಬಿಐ ನಡುವಿನ ವಿವಾದವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಪ್ರೀಕೋರ್ಟ್ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದರು.





