ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಕನಿಷ್ಠ 10 ದಿನಗಳ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.
ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ
ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು.
ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಕೊನಿಡೇಲಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ “ಪವನ್ ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ಪ್ರೀತಿ ಮತ್ತು ಪ್ರಾರ್ಥನೆಗೆ ಧನ್ಯವಾದಗಳು” ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಪವನ್ ಕಲ್ಯಾಣ್ ಅವರು ಕಳೆದ ಕೆಲವು ತಿಂಗಳಿನಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ಜನಸೇನಾ ಪಕ್ಷದ ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ಕಲ್ಯಾಣ್ ಅವರ ಆರೋಗ್ಯ ವಿಚಾರಿಸಿ ದೂರವಾಣಿ ಮೂಲಕ ಮಾತನಾಡಿದ್ದು, ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗಲಿ ಎಂದು ಹಾರೈಸಿದ್ದಾರೆ. ಪವನ್ ಕಲ್ಯಾಣ್ ಅವರು ಪ್ರಧಾನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…