Death of 5 Tigers; Forest Department Needs to Wake Up
ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಐದು ಹುಲಿಗಳ ಸಾವಿನ ಪ್ರಕರಣ ಸಂಬಂಧ ಪ್ರಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ ಕಳೆದ ತಿಂಗಳು ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ ಶೇಕಡಾ.80ರಷ್ಟು ಖಾಲಿ ಇವೆ. ದೊಡ್ಡ ಸಂಖ್ಯೆಯಲ್ಲಿ ಹುದ್ದೆ ಖಾಲಿ ಇರುವುದು ಸರಿಯಲ್ಲ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷಕ್ಕೆ ಎಲ್ಲಾ ರಾಜ್ಯಗಳು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿರ್ದೇಶನ ನೀಡಿದೆ.
ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಹಾಗೂ ಹವಮಾನ ಬದಲಾವಣೆ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…