Mysore
19
scattered clouds

Social Media

ಶುಕ್ರವಾರ, 27 ಡಿಸೆಂಬರ್ 2024
Light
Dark

ಮನಮೋಹನ್ ಸಿಂಗ್‌ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಕೇಂದ್ರ

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್(‌92) ಅವರು ಗುರುವಾರ ವಿಧಿವಶರಾಗಿದ್ದಾರೆ. ಅವರ ಗೌರವಾರ್ಥ ಕೇಂದ್ರ ಸರ್ಕಾರ ದೇಶಾದ್ಯಂತ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಏಳು ದಿನ ಅಂದರೆ ಡಿ.26ರಿಂದ 2025ರ ಜನವರಿ 1 ರವರೆಗೆ ಶೋಕಾಚರಣೆಯನ್ನು ಘೋಷಿಸಿದೆ. ಈ ಸಮಯದಲ್ಲಿ ಸಾಂಪ್ರದಾಯಿಕವಾಗಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಯಾವುದೇ ಅಧಿಕೃತ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಕೆಂದ್ರ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶೋಕಾಚರಣೆಯ ಸಮಯದಲ್ಲಿ ದೇಶದಾದ್ಯಂತ ಪ್ರಮುಖ ರಾಷ್ಟ್ರೀಯ ಕಟ್ಟಡಗಳು ಅಥವಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಅಲ್ಲದೇ ದೇಶದ ಹೊರಗೆ ಇರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ.  ಜೊತೆಗೆ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುತ್ತದೆ.

 

Tags: