ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಗುರುವಾರ ವಿಧಿವಶರಾಗಿದ್ದಾರೆ. ಅವರ ಗೌರವಾರ್ಥ ಕೇಂದ್ರ ಸರ್ಕಾರ ದೇಶಾದ್ಯಂತ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.
ಏಳು ದಿನ ಅಂದರೆ ಡಿ.26ರಿಂದ 2025ರ ಜನವರಿ 1 ರವರೆಗೆ ಶೋಕಾಚರಣೆಯನ್ನು ಘೋಷಿಸಿದೆ. ಈ ಸಮಯದಲ್ಲಿ ಸಾಂಪ್ರದಾಯಿಕವಾಗಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಯಾವುದೇ ಅಧಿಕೃತ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಕೆಂದ್ರ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶೋಕಾಚರಣೆಯ ಸಮಯದಲ್ಲಿ ದೇಶದಾದ್ಯಂತ ಪ್ರಮುಖ ರಾಷ್ಟ್ರೀಯ ಕಟ್ಟಡಗಳು ಅಥವಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಅಲ್ಲದೇ ದೇಶದ ಹೊರಗೆ ಇರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ. ಜೊತೆಗೆ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುತ್ತದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…