ಹೊಸದಿಲ್ಲಿ : ನರೇಂದ್ರಮೋದಿ ಸರ್ಕಾರವು ದೇಶದಿಂದ ಎಲ್ಲಾ ರೀತಿಯ ಮಾದಕ ದ್ರವ್ಯಗಳನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದೆ ಮತ್ತು ಈ ಗುರಿಯನ್ನು ಸಾಧಿಸಲು ಸರ್ವಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎಎನ್‌ಟಿಎಫ್) ಮುಖ್ಯಸ್ಥರ ಎರಡನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಡ್ರಗ್ಸ್ ಹಾವಳಿಯ ವಿರುದ್ಧ ಕ್ರಮದ ಪ್ರಮಾಣವನ್ನು ಬದಲಾಯಿಸುವ ಸಮಯ ಬಂದಿದೆ. ಇದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಯಶಸ್ಸುಗಳಿವೆ ಎಂದು ಹೇಳಿದರು.
ಪ್ರಪಂಚದ ಕೆಲವು ಭಾಗಗಳಲ್ಲಿ ಜನರು ರಾಷ್ಟ್ರದ ಅಭಿವೃದ್ಧಿ ಮತ್ತು ಮಾದಕ ದ್ರವ್ಯ ಸೇವನೆಯ ಸವಾಲಿನ ನಡುವಿನ ಸಂಬಂಧವನ್ನು ನೋಡಿದ್ದಾರೆ . ದುರದೃಷ್ಟವಶಾತ್, ಜಾಗತಿಕವಾಗಿ ಡ್ರಗ್?ಸ ಪೂರೈಕೆಯಾಗುವ ಎರಡು ಪ್ರದೇಶಗಳು ನಮಗೆ ತುಂಬಾ ಹತ್ತಿರದಲ್ಲಿವೆ. ಆದ್ದರಿಂದ ನಾವು ಅದರ ವಿರುದ್ಧ ಬಲವಾಗಿ ಹೋರಾಡುವ ಸಮಯ ಇದು ಎಂದು ಹೇಳಿದರು.
ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ಮತ್ತು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಪ್ರಧಾನಿ ಮೋದಿ ೨೦೪೭ರ ಗುರಿಯನ್ನು ಹೊಂದಿದ್ದಾರೆ. ಅವರ ಈ ಕನಸನ್ನು ನನಸಾಗಿಸಲು, ದೇಶವು ಸಂಪೂರ್ಣ ಸುಭದ್ರವಾಗಿರಬೇಕು. ಸಂಪೂರ್ಣ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಽಸಲು, ಯುವ ಪೀಳಿಗೆಯನ್ನು ಮಾದಕ ವಸ್ತುಗಳಿಂದ ರಕ್ಷಿಸುವುದು ಬಹಳ ಮುಖ್ಯ. ಯಾವುದೇ ಮಹಾನ್ ರಾಜ್ಯದ ಅಡಿಪಾಯ ಅದರ ಯುವ ಪೀಳಿಗೆಯಾಗಿದೆ ಎಂದು ಶಾ ಹೇಳಿದರು.
ಇದೇ ವೇಳೆ ದೇಶದ ವಿವಿಧ ಭಾಗಗಳಲ್ಲಿ ವಶಪಡಿಸಿಕೊಂಡ ೪,೭೯೪ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸುವ ಪ್ರಕ್ರಿಯೆಗೆ ಗೃಹ ಸಚಿವರು ಚಾಲನೆ ನೀಡಿದರು.
ಎಲ್ಲಾ ಎಎನ್‌ಟಿಎಫ್‌ಗಳನ್ನು ಒಗ್ಗೂಡಿಸಿ ಡ್ರಗ್ಸ್ ಪಿಡುಗನ್ನು ನಿರ್ಮೂಲನೆ ಮಾಡಲು ಮೋದಿ ಸರ್ಕಾರ ನಿರ್ಧರಿಸಿದೆ. ಅವರು ಎನ್‌ಸಿಬಿಯ ವಾರ್ಷಿಕ ವರದಿ ೨೦೨೪ ಅನ್ನು ಸಹ ಬಿಡುಗಡೆ ಮಾಡಿದರು.
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…