Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಅಯೋಧ್ಯೆಯಲ್ಲಿ ಭವ್ಯ ದೀಪೋತ್ಸವಕ್ಕೆ ಸಜ್ಜು

ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರದ ಬಾಲರಾಮನಿಗೆ ಇದು ಮೊದಲ ದೀಪಾವಳಿ ಹಬ್ಬವಾಗಿದ್ದು, ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಈಗಾಗಲೇ ಅಯೋಧ್ಯೆಯಲ್ಲಿ ಎಂಟನೇ ಆವೃತ್ತಿಯ ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ನಾಳೆಯಿಂದ ಇಡೀ ಅಯೋಧ್ಯೆ ನಗರವನ್ನು 25 ಲಕ್ಷ ಮಣ್ಣಿನ ದೀಪಗಳಿಂದ ಬೆಳಗಿಸಲಾಗುತ್ತದೆ.

ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ದೇವಸ್ಥಾನದಲ್ಲಿ ದೀಪಗಳನ್ನು ಇರಿಸುವ ಕೆಲಸ ನಡೆಯುತ್ತಿದೆ. ಈ ವರ್ಷದ ಕಾರ್ಯಕ್ರಮವು ವಿಶೇಷ ಮಹತ್ವವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಅಯೋಧ್ಯೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಅಯೋಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Tags: