ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರದ ಬಾಲರಾಮನಿಗೆ ಇದು ಮೊದಲ ದೀಪಾವಳಿ ಹಬ್ಬವಾಗಿದ್ದು, ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಈಗಾಗಲೇ ಅಯೋಧ್ಯೆಯಲ್ಲಿ ಎಂಟನೇ ಆವೃತ್ತಿಯ ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ನಾಳೆಯಿಂದ ಇಡೀ ಅಯೋಧ್ಯೆ ನಗರವನ್ನು 25 ಲಕ್ಷ ಮಣ್ಣಿನ ದೀಪಗಳಿಂದ ಬೆಳಗಿಸಲಾಗುತ್ತದೆ.
ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ದೇವಸ್ಥಾನದಲ್ಲಿ ದೀಪಗಳನ್ನು ಇರಿಸುವ ಕೆಲಸ ನಡೆಯುತ್ತಿದೆ. ಈ ವರ್ಷದ ಕಾರ್ಯಕ್ರಮವು ವಿಶೇಷ ಮಹತ್ವವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಪ್ರಯುಕ್ತ ಅಯೋಧ್ಯೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಅಯೋಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…