ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.
1310 ರೂಪಾಯಿ ಇದ್ದ ಭತ್ತಕ್ಕೆ 2300 ರೂ ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಹಾಗೂ 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.