ದೇಶ- ವಿದೇಶ

ಕೇಂದ್ರ ಸರ್ಕಾರದಿಂದ ರೈತರಿಗೆ ದೀಪಾವಳಿ ಗಿಫ್ಟ್‌

ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್‌ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.

1310 ರೂಪಾಯಿ ಇದ್ದ ಭತ್ತಕ್ಕೆ 2300 ರೂ ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್‌ ಭತ್ತ ಹಾಗೂ 124 ಲಕ್ಷ ಟನ್‌ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

17 mins ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

47 mins ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

1 hour ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

2 hours ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

2 hours ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

2 hours ago