ಸುಲ್ತಾನಪುರ(ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಕ್ಟೋಬರ್ 1 ಕ್ಕೆ ಮುಂದೂಡಲಾಗಿದೆ.
ಬಾರ್ ಅಸೋಸಿಯೇಷನ್‌ನಲ್ಲಿ ಆರೋಗ್ಯ ಶಿಬಿರ ಆಯೋಜಿಸಿದ್ದರಿಂದ ವಿಶೇಷ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಯನ್ನು ಇಂದು ಮುಂದೂಡಲಾಗಿದೆ.
ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಅ.1ಕ್ಕೆ ಮುಂದೂಡಿದೆ.
2018 ರ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಸ್ಥಳೀಯ ಬಿಜೆಪಿ ನಾಯಕ ವಿಜಯ್‌ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.
ವಿಪಕ್ಷ ನಾಯಕ ರಾಗಾ ಅವರು ʼಭಾರತ್ ಜೋಡೊ ನ್ಯಾಯ ಯಾತ್ರೆʼಯ ಸಂದರ್ಭದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್ ಅವರಿಗೆ ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿತ್ತು.
ಜಾಮೀನು ಮಂಜೂರಾದ ನಂತರ ರಾಗಾ ಅವರಿಗೆ ಅಮಿತ್ ಶಾ ಅವರ ವಿರುದ್ಧದ ಹೇಳಿಕೆ ದಾಖಲಿಸುವಂತೆ ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ರಾಹುಲ್ ಅವರು ಲೋಕಸಭೆ ಚುನಾವಣೆಯಿಂದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಬಳಿಕ ಜು.26 ರಂದು ರಾಹುಲ್ ನ್ಯಾಯಾಲಯದಲ್ಲಿ ತಮ್ಮ ಹೇಳೀಕೆಗಳನ್ನು ದಾಖಲು ಮಾಡಿದ್ದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…