ದೇಶ- ವಿದೇಶ

ಮಾನನಷ್ಟ ಮೊಕದ್ದಮೆ: ವಿಪಕ್ಷ ನಾಯಕ ರಾಗಾ ವಿಚಾರಣೆ ಮುಂದೂಡಿಕೆ

ಸುಲ್ತಾನಪುರ(ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಕ್ಟೋಬರ್‌ 1 ಕ್ಕೆ ಮುಂದೂಡಲಾಗಿದೆ.

ಬಾರ್‌ ಅಸೋಸಿಯೇಷನ್‌ನಲ್ಲಿ ಆರೋಗ್ಯ ಶಿಬಿರ ಆಯೋಜಿಸಿದ್ದರಿಂದ ವಿಶೇಷ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಯನ್ನು ಇಂದು ಮುಂದೂಡಲಾಗಿದೆ.

ಸ್ಥಳೀಯ ಬಿಜೆಪಿ ನಾಯಕ ವಿಜಯ್‌ ಮಿಶ್ರಾ ಅವರು ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಅ.1ಕ್ಕೆ ಮುಂದೂಡಿದೆ.

2018 ರ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್‌ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ರಾಹುಲ್‌ ಗಾಂಧಿ ಅವರ ವಿರುದ್ಧ ಸ್ಥಳೀಯ ಬಿಜೆಪಿ ನಾಯಕ ವಿಜಯ್‌ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.

ವಿಪಕ್ಷ ನಾಯಕ ರಾಗಾ ಅವರು ʼಭಾರತ್‌ ಜೋಡೊ ನ್ಯಾಯ ಯಾತ್ರೆʼಯ ಸಂದರ್ಭದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್‌ ಅವರಿಗೆ ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿತ್ತು.

ಜಾಮೀನು ಮಂಜೂರಾದ ನಂತರ ರಾಗಾ ಅವರಿಗೆ ಅಮಿತ್‌ ಶಾ ಅವರ ವಿರುದ್ಧದ ಹೇಳಿಕೆ ದಾಖಲಿಸುವಂತೆ ಹಲವು ಬಾರಿ ನೋಟಿಸ್‌ ನೀಡಲಾಗಿತ್ತು. ಆದರೆ, ರಾಹುಲ್‌ ಅವರು ಲೋಕಸಭೆ ಚುನಾವಣೆಯಿಂದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಬಳಿಕ ಜು.26 ರಂದು ರಾಹುಲ್‌ ನ್ಯಾಯಾಲಯದಲ್ಲಿ ತಮ್ಮ ಹೇಳೀಕೆಗಳನ್ನು ದಾಖಲು ಮಾಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago