ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿಕೂಟ ಗೆಲುವು ಸಾಧಿಸಿದೆ.
ಬಿಜೆಪಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಆರ್ಟಿಕಲ್ 370 ರದ್ದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಬಿಜೆಪಿ ಸೋಲಿಗೆ ಕಾರಣ ಏನು ಎಂಬುದನ್ನು ಅಧ್ಯಯನ ಮಾಡಬೇಕಿದೆ.
90 ವಿಧಾನಸಭಾ ಕ್ಷೇತ್ರಗಳಿರುವ ಜಮ್ಮು-ಕಾಶ್ಮೀರದಲ್ಲಿ ದಶಕದ ಬಳಿಕ ಚುನಾವಣೆ ನಡೆದಿದೆ. ಆದರೆ ನಾವೇ ಹ್ಯಾಟ್ರಿಕ್ ಗೆಲುವು ಸಾಧಿಸುತ್ತೇವೆ ಎಂಬ ಆಸೆಯಲ್ಲಿದ್ದ ಬಿಜೆಪಿ ನಾಯಕರಿಗೆ ಈಗ ಬಿಗ್ ಶಾಕ್ ಎದುರಾಗಿದೆ.
ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದ್ದವು. ಈ ಸಮೀಕ್ಷೆ ವರದಿಗಳು ಈಗ ನಿಜವಾಗಿದ್ದು, ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ನಾಯಕರ ಮುಖದಲ್ಲಿ ಮಂದಹಾಸ ಮನೆಮಾಡಿದೆ.
ಜಮ್ಮು-ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್.18ರಿಂದ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ, ಬಿಜೆಪಿ ಹಾಗೂ ಪಿಡಿಪಿ ಏಕಾಂಗಿಯಾಗಿ ಅಖಾಡದಲ್ಲಿದ್ದವು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…