ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಾಗಿದ್ದಾರೆ. ಕಳೆದ ಕೆಲದಿನಗಳಿಂದ ಸಚಿವ ರಾಜನಾಥ್ ಸಿಂಗ್ ಬೆನ್ನುನೋವಿನಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಾಗಿ ನ್ಯೂರೋ ಸರ್ಜನ್ ಡಾ.ಅಮೋಲ್ ರಹೇಜಾ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇನ್ನು ವೈದ್ಯರು ಕೂಡ ಅವರ ಆರೋಗ್ಯವನ್ನು ತಪಾಸಣೆ ಮಾಡಿ ಆರೋಗ್ಯ ಸ್ಥಿರವಾಗಿದೆ. ಎಂಆರ್ ಐ ಸ್ಕ್ಯಾನ್ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಬಿಜೆಪಿಯ ಹಿರಿಯ ನಾಯಕ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಸ್ತುತ ಉತ್ತರಪ್ರದೇಶದ ರಾಜಧಾನಿ ಲಖನೌದಿಂದ ಸಂಸದರಾಗಿದ್ದಾರೆ.