ನವದೆಹಲಿ: ದೆಹಲಿಯ ಚಾಣಿಕ್ಯಪುರಿ ರಾಜತಾಂತ್ರಿಕ ಎನ್‌ಕ್ಲೇವ್ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಹೊಸ ಭವನ ʼಕಾವೇರಿʼ ಯ ಉದ್ಘಾಟನೆ ಏ.2 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.
2019ರಲ್ಲಿ ಹೊಸ ಕಟ್ಟಡ ನಿರ್ಮಾಣದ ಯೋಜನೆಗೆ ಅನುಮೋದನೆ ದೊರೆಯಿತು. ಒಟ್ಟು 140 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಹೊಸ ಕಟ್ಟಡ ನಿರ್ಮಿಸಿದೆ.
ನೂತನ ಭವನದಲ್ಲಿ ರಾಜ್ಯಪಾಲರಿಗೆ ವಿಶೇಷ ಸ್ವೀಟ್ ಕೊಠಡಿ. ಮುಖ್ಯಮಂತ್ರಿ ಮತ್ತು ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ಗಣ್ಯ ವ್ಯಕ್ತಿಗಳಿಗೆ ಪ್ರತ್ಯೇಕ ವಿಶೇಷ ಕೊಠಡಿಗಳನ್ನು ನಿರ್ಮಿಸಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ಹೆಚ್‌ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಪಾಲ್ಗೊಳ್ಳಲಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಹೆಚ್‌ಸಿ ಮಹದೇವಪ್ಪ ಹಾಗೂ ಸತೀಶ್ ಜಾರಕಿಹೊಳಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.





