ದೇಶ- ವಿದೇಶ

ದೆಹಲಿ: ಏ.2 ರಂದು ಕರ್ನಾಟಕ ಭವನ ʼಕಾವೇರಿʼ ಯ ಉದ್ಘಾಟನೆ

ನವದೆಹಲಿ: ದೆಹಲಿಯ ಚಾಣಿಕ್ಯಪುರಿ ರಾಜತಾಂತ್ರಿಕ ಎನ್‌ಕ್ಲೇವ್‌ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಹೊಸ ಭವನ ʼಕಾವೇರಿʼ ಯ ಉದ್ಘಾಟನೆ ಏ.2 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.

2019ರಲ್ಲಿ ಹೊಸ ಕಟ್ಟಡ ನಿರ್ಮಾಣದ ಯೋಜನೆಗೆ ಅನುಮೋದನೆ ದೊರೆಯಿತು. ಒಟ್ಟು 140 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಹೊಸ ಕಟ್ಟಡ ನಿರ್ಮಿಸಿದೆ.

ನೂತನ ಭವನದಲ್ಲಿ ರಾಜ್ಯಪಾಲರಿಗೆ ವಿಶೇಷ ಸ್ವೀಟ್‌ ಕೊಠಡಿ. ಮುಖ್ಯಮಂತ್ರಿ ಮತ್ತು ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ಗಣ್ಯ ವ್ಯಕ್ತಿಗಳಿಗೆ ಪ್ರತ್ಯೇಕ ವಿಶೇಷ ಕೊಠಡಿಗಳನ್ನು ನಿರ್ಮಿಸಲಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಪ್ರಲ್ಹಾದ್‌ ಜೋಶಿ, ಹೆಚ್‌ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಪಾಲ್ಗೊಳ್ಳಲಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರಾದ ಹೆಚ್‌ಸಿ ಮಹದೇವಪ್ಪ ಹಾಗೂ ಸತೀಶ್‌ ಜಾರಕಿಹೊಳಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago