ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಭಾರತೀಯ ಚುನಾವಣಾ ಆಯೋಗದಿಂದ ದಿನಾಂಕ ನಿಗಧಿಪಡಿಸಿದ್ದು, ಫೆಬ್ರವರಿ 5 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಈ ಕುರಿತು ಇಂದು(ಜನವರಿ.7) ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ, ದೆಹಲಿ ವಿಧಾನಸಭೆ ಚುನಾವಣೆಗೆ ಅಧಿಕೃತವಾಗಿ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆಗೆ ಜನವರಿ 10 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಜ.17ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಇನ್ನೂ ಜ.18 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು, ಜ.20ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ದೆಹಲಿಯ ಒಟ್ಟು 70 ಕ್ಷೇತ್ರಗಳಲ್ಲಿ ಏಕ ಹಂತದಲ್ಲಿ ಫೆಬ್ರವರಿ.5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶದ ದಿನವಾಗಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತರು ಇವಿಎಂ ಮೇಲಿನ ಆರೋಪವನ್ನು ತಳ್ಳಿ ಹಾಕಿ, ಮತದಾನ ಮುಗಿದ ಬಳಿಕವೇ ಇಎಂಎಂಗೆ ಸೀಲ್‌ಡೌನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.





