ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಭಾರತೀಯ ಚುನಾವಣಾ ಆಯೋಗದಿಂದ ದಿನಾಂಕ ನಿಗಧಿಪಡಿಸಿದ್ದು, ಫೆಬ್ರವರಿ 5 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಈ ಕುರಿತು ಇಂದು(ಜನವರಿ.7) ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ, ದೆಹಲಿ ವಿಧಾನಸಭೆ ಚುನಾವಣೆಗೆ ಅಧಿಕೃತವಾಗಿ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆಗೆ ಜನವರಿ 10 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಜ.17ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಇನ್ನೂ ಜ.18 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು, ಜ.20ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ದೆಹಲಿಯ ಒಟ್ಟು 70 ಕ್ಷೇತ್ರಗಳಲ್ಲಿ ಏಕ ಹಂತದಲ್ಲಿ ಫೆಬ್ರವರಿ.5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶದ ದಿನವಾಗಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತರು ಇವಿಎಂ ಮೇಲಿನ ಆರೋಪವನ್ನು ತಳ್ಳಿ ಹಾಕಿ, ಮತದಾನ ಮುಗಿದ ಬಳಿಕವೇ ಇಎಂಎಂಗೆ ಸೀಲ್‌ಡೌನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ಸತ್ಯಕ್ಕಾಗಿ ಸಿಂಹಾಸನವನ್ನೇ ತೃಣದಂತೆ ಕಂಡಿದ್ದ ಸತ್ಯ ಹರಿಶ್ಚಂದ್ರ ಮಹಾರಾಜರಿಗೆ ಅಪಮಾನ ಮಾಡಬೇಡಿ. ಆ ಪುಣ್ಯ ಪುರುಷರ ಹೆಸರಿಗೆ ಮಸಿ…
ಬೆಂಗಳೂರು: ಎಚ್‌ಎಂಪಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಮಾಡಬೇಡಿ ಎಂದು ಜನರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿರುವ ಪವಿತ್ರಾ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಸಭೆ…
ನವದೆಹಲಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಜಿಲ್ಲೆಯ…
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವ್ಯಕ್ತಿತ್ವದ ವಿರುದ್ಧವಾಗಿ ಸಹನೆ…
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ವಿವಿಧ ಗ್ರಾಮಗಳಿಗೆ ತೆರಳಿ ಜನರಿಂದ ಕುಂದು ಕೊರತೆಗಳ ಅಹವಾಲುಅನ್ನು…